Home ಕರಾವಳಿ ನಿರಂತರ ಮಳೆ: ನಾಳೆ ಉಡುಪಿ, ಕೊಡಗು ಜಿಲ್ಲಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ನಿರಂತರ ಮಳೆ: ನಾಳೆ ಉಡುಪಿ, ಕೊಡಗು ಜಿಲ್ಲಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

0

ಉಡುಪಿ: ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ (ಜು. 26‌) ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

ಕೊಡಗು ಜಿಲ್ಲಾದ್ಯಂತ ರಜೆ ಘೋಷಣೆ

ಕೊಡಗು ಜಿಲ್ಲಾದ್ಯಂತ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜು.26 ರಂದು ಕೂಡಾ ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

ಆದರೆ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳಿಗೆ ಜು.25ರಂದು ರಜೆ ಇರುವುದಿಲ್ಲ ಎಂದು ಅವರು ಪ್ರಕಟನೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version