ವಿವಾದಿತ ‘ಭಾರತ ಮಾತಾ ಪೂಜನಾ’ ಕಾರ್ಯಕ್ರಮ ರದ್ದು: ಮಂಗಳೂರು ವಿವಿ ಪ್ರಾಂಶುಪಾಲೆ

Prasthutha|

ಮಂಗಳೂರು:  ಮಂಗಳೂರು ವಿಶ್ವ ವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ವಿವಾದಿತ ‘ಭಾರತ ಮಾತಾ ಪೂಜನಾ’ ಕಾರ್ಯಕ್ರಮಕ್ಕೆ ಅವಕಾಶವಿಲ್ಲ ಎಂದು ಕಾಲೇಜಿನ ಪ್ರಾಂಶುಪಾಲೆ ಅನುಸೂಯ ರೈ ಸ್ಪಷ್ಟಪಡಿಸಿದ್ದಾರೆ.

- Advertisement -

‘ಭಾರತ ಮಾತಾ ಪೂಜನಾ’ ಎಂಬ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆಯೋಜಿಸಿದ್ದು, ವಿವಿ ಕುಲಪತಿಗಳು ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದಕ್ಕೆ ಸಾಮಾಜಿಕ ವಲಯಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಅಲ್ಲದೆ, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರು ಸಂಘಪರಿವಾರ ಸಿದ್ದಾಂತದ ಕಾರ್ಯಕ್ರಮವನ್ನು ಆಯೋಜಿಸಿರುವುದು ಖಂಡನೀಯ. ಇದನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಕಾರ್ಯಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ಬಂದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದುಪಡಿಸಿರುವುದಾಗಿ ಪ್ರಾಂಶುಪಾಲರು ತಿಳಿಸಿದ್ದಾರೆ.

Join Whatsapp