ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ; ಸಿ.ಟಿ.ರವಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್

Prasthutha|

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಅವರ ವಿರುದ್ಧ ನಗರದ ಹೈಗ್ರೌಂಡ್ಸ್ ಠಾಣೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (KPCC) ದೂರು ನೀಡಿದೆ.

- Advertisement -


ಶಾಸಕ ಸಿಟಿ ರವಿ ಅವರು ಸಿದ್ದರಾಮಯ್ಯ ಅವರ ಹೆಸರನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಹಿಂದುಗಳ ಕೊಲೆಯಾಗುತ್ತದೆ ಎಂಬ ಹೇಳಿಕೆ ನೀಡಿಕೋಮು ಭಾವನೆ ಕೆರಳಿಸುವ ಮೂಲಕ ಧರ್ಮ ಸಂಘರ್ಷ ಉಂಟುಮಾಡಿ ರಾಜ್ಯದಲ್ಲಿ ಶಾಂತಿ ಕದಡುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹೇಳಿಕೆಗಳನ್ನು ನೀಡಿದ್ದಾರೆ. ಆದ್ದರಿಂದ ಅವರ ಹೇಳಿಕೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಈ ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅವರನ್ನು ವಿಚಾರಣೆಗೆ ಒಳಪಡಿಸಬೇಕು” ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಒತ್ತಾಯಿಸಿದ್ದಾರೆ.


ಸಿ.ಟಿ.ರವಿ ಅವರು ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಹಾಗೂ ಪಕ್ಷದ ನಾಯಕರ ವಿರುದ್ಧ ಸುಳ್ಳು ಹಾಗೂ ಪ್ರಚೋದನಕಾರಿ ಮತ್ತು ಕಾನೂನು ಸುವ್ಯವಸ್ಥೆ ಹದಗೆಡಿಸುವ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಭಾರತೀಯ ದಂಡ ಸಮಿತಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಬೇಕು’ ಎಂದು ಕಾಂಗ್ರೆಸ್ ಆಗ್ರಹಿಸಿದೆ.

Join Whatsapp