ಹಿಜಾಬ್ ಸಂಬಂಧವಾಗಿ ವಿವಾದಾತ್ಮಕ ಹೇಳಿಕೆ: ಕಾಂಗ್ರೆಸ್ ಮುಖಂಡ ಬಂಧನ

Prasthutha|

ಕಲಬುರಗಿ: ಹಿಜಾಬ್ ಸಂಬಂಧವಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಅವರನ್ನು ಹೈದರಾಬಾದ್ನಲ್ಲಿ ಪೊಲೀಸರು ಬಂಧಿಸಿದ್ದಾರೆ.

- Advertisement -

ಸೇಡಂ ಪಟ್ಟಣದಲ್ಲಿ ನಡೆದ ಹಿಜಾಬ್ ಪರ ಪ್ರತಿಭಟನೆಯಲ್ಲಿ ಮುಕ್ರಂ ಖಾನ್ ಅವರ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಸಂಬಂದ ಕಳೆದ ಫೆ.16 ರಂದು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದಂತೆ ಮುಕ್ರಂ ಖಾನ್ ಜಾಮೀನು ಅರ್ಜಿ ಸಲ್ಲಿಸಿದ್ದರು.

ಕಲಬುರಗಿ ಜಿಲ್ಲಾ ನ್ಯಾಯಾಲಯವು ಮುಕ್ರಂ ಖಾನ್ ಜಾಮೀನು ಅರ್ಜಿಯನ್ನ ವಜಾಗೊಳಿಸಿ ಆದೇಶಿಸಿತ್ತು. ಈ ಬೆನ್ನಲ್ಲೇ ಪೊಲೀಸರು ಹೈದರಾಬಾದ್ನಲ್ಲಿ ಮುಕ್ರಂ ಖಾನ್ನನ್ನು ವಶಕ್ಕೆ ಪಡೆದಿದ್ದಾರೆ.

Join Whatsapp