ದಲಿತರಿಂದ ಬೌದ್ಧ ಧರ್ಮಕ್ಕೆ ಮತಾಂತರ: ದೆಹಲಿ ಮುಖ್ಯಮಂತ್ರಿ, ಸಚಿವರ ವಿರುದ್ಧ ಬಿಜೆಪಿ ದೂರು ದಾಖಲು

Prasthutha|

ನವದೆಹಲಿ: ದಲಿತರ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ದೆಹಲಿ ಘಟಕವು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕ್ಯಾಬಿನೆಟ್ ಸಚಿವ ರಾಜೇಂದ್ರ ಪಾಲ್ ಗೌತಮ್ ವಿರುದ್ಧ ದೂರು ನೀಡಿದೆ.

- Advertisement -

ಘಟನೆಗೆ ಸಂಬಂಧಿಸಿದಂತೆ ದೆಹಲಿಯ ಬಿಜೆಪಿ ಅಧ್ಯಕ್ಷ ಆದೇಶ ಗುಪ್ತಾ ಅವರು ದೆಹಲಿ ಮುಖ್ಯಮಂತ್ರಿ ಮತ್ತು ಕ್ಯಾಬಿನೆಟ್ ಸಚಿವ ರಾಜೇಂದ್ರ ಪಾಲ್ ಗೌತಮ್ ವಿರುದ್ಧ ಹಿಂದೂ ದೇವರ ವಿರುದ್ಧ ಘೋಷಣೆ ಕೂಗಿದ ಆರೋಪದಲ್ಲಿ ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ನಿಟ್ಟಿನಲ್ಲಿ ದೆಹಲಿ ಪೊಲೀಸರು ಐಪಿಸಿ ಸೆಕ್ಷನ್ 153ಎ, 153ಬಿ, 295ಎ, 298, 505, 506 ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಗುಪ್ತಾ ಅವರು ದೆಹಲಿಗೆ ಪೊಲೀಸರನ್ನು ಆಗ್ರಹಿಸಿದ್ದಾರೆ.

- Advertisement -

ಇತ್ತೀಚೆಗೆ ದೆಹಲಿಯ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಎಎಪಿ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರ ನೇತೃತ್ವದಲ್ಲಿ ಸುಮಾರು 10 ಸಾವಿರಕ್ಕೂ ಅಧಿಕ ದಲಿತರು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದರು. ಈ ವೇಳೆ ಹಿಂದೂ ಧರ್ಮದ ದೇವರು, ದೇವತೆಗಳ ವಿರುದ್ಧ ಘೋಷಣೆ ಕೂಗಲಾಗಿತ್ತು ಎಂದು ಆರೋಪಿಸಿ ಬಿಜೆಪಿ ದೂರು ನೀಡಿದೆ.

ಘಟನೆಗೆ ಪ್ರತಿಕ್ರಿಯಿಸಿದ ದೆಹಲಿ ಪೊಲೀಸರು, ಬಿಜೆಪಿ ನೀಡಿದ ದೂರಿನ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Join Whatsapp