ಮಡಿಕೇರಿ | ಅಂಬೇಡ್ಕರ್ ಝಿಂದಾಬಾದ್ ಘೋಷಣೆಯನ್ನು ಪಾಕಿಸ್ತಾನ ಝಿಂದಾಬಾದ್ ಎಂದು ತಿರುಚಿದ ಸಂಘಪರಿವಾರ !

Prasthutha|

ಮಡಿಕೇರಿ: ಹಲ್ಲೆಗೊಳಗಾದ ಸಂತ್ರಸ್ತ ಕುಟುಂಬ ಮತ್ತು ಸ್ಥಳೀಯ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಶನಿವಾರಸಂತೆ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸುವಾಗ  ಅಂಬೇಡ್ಕರ್ ಝಿಂದಾಬಾದ್ ಘೋಷಣೆ ಕುಗಿದ್ದನ್ನು ತಿರುಚಿ ಪಾಕಿಸ್ತಾನ ಝಿಂದಾಬಾದ್ ಎಂದು ಸುಳ್ಳು ಸುದ್ದಿ ಹಬ್ಬಿಸಿ ಕೊಡಗಿನಲ್ಲಿ ಸಂಘಪರಿವಾರವರು ಅಶಾಂತಿ ಸೃಷ್ಟಿಸುತ್ತಿದ್ದಾರೆ.

- Advertisement -

ಶನಿವಾರಸಂತೆ ನಿವಾಸಿ ಜಾಕಿರ್ ಪಾಷ ಅವರು ತನ್ನ ಪತ್ನಿ, ಮಕ್ಕಳೊಂದಿಗೆ ಕಾರಿನಲ್ಲಿ ಗುಡುಗಳಲೆ ಎಂಬಲ್ಲಿಗೆ ಹೋಗುತ್ತಿದ್ದಾಗ ಎರಡು ಬೈಕ್ ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು, ಕಾರಿಗೆ ಅಡ್ಡ ಬಂದು ಅಸಭ್ಯವಾಗಿ ವರ್ತಿಸಿದ್ದರು. ಕಾರು ನಿಲ್ಲಿಸಿದ ಜಾಕಿರ್, ಅವರನ್ನು ಪ್ರಶ್ನಿಸಿದಾಗ ನಾಲ್ವರು ಸೇರಿ ಪಾಷ ಅವರಿಗೆ ಹಲ್ಲೆ ನಡೆಸಿದ್ದರು. ಈ ವೇಳೆ ಕಾರಿನಲ್ಲಿ ಕುಳಿತಿದ್ದ ಅವರ ಪತ್ನಿ ತಕ್ಷಣ ಜಾಕಿರ್ ಅವರ ಸಹೋದರರಿಗೆ ಕರೆ ಮಾಡಿ, ತಕ್ಷಣ ಸ್ಥಳಕ್ಕೆ ಬರುವಂತೆ ಹೇಳಿದ್ದಾರೆ. ಸ್ಥಳಕ್ಕೆ ಧಾವಿಸಿದ ಜಾಕಿರ್ ಅವರ ಸಹೋದರರು, ದುಷ್ಕರ್ಮಿಗಳ ಮೇಲೆ ಹಲ್ಲೆ ನಡೆಸಿದ್ದು, ಈ ವೇಳೆ ಇಬ್ಬರು ಪರಾರಿಯಾಗಿದ್ದಾರೆ. ಮತ್ತಿಬ್ಬರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

ಈ ವಿಷಯ ತಿಳಿದ ಸಂಘಪರಿವಾರದ ನಾಯಕರು ಪೊಲೀಸರ ಮೇಲೆ ಒತ್ತಡ ಹಾಕಿದ್ದಾರೆ. ಒತ್ತಡಕ್ಕೆ ಮಣಿದ ಪೊಲೀಸರು ದೂರು ನೀಡಲು ಬಂದ ಜಾಕಿರ್ ಪಾಷ, ಅಝರ್, ಮುಜಾಹಿದ್ ಮತ್ತು ರಶೀದ್ ಅವರ ಮೇಲೆ 307, 323,142,144,147,148 ಸೇರಿದಂತೆ ಐಪಿಸಿಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿ, ಬಂಧಿಸಿದ್ದರು. ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುತ್ತಿಲ್ಲ, ಅಮಾಯಕರನ್ನು ಪೊಲೀಸರು ಸುಳ್ಳು ಕೇಸಿನಲ್ಲಿ ಬಂಧಿಸುತ್ತಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಕುಟುಂಬ ಮತ್ತು ಸ್ಥಳೀಯ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಶನಿವಾರಸಂತೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದರು. ಈ ವೇಳೆ ಅಂಬೇಡ್ಕರ್ ಝಿಂದಾಬಾದ್ ಎಂದು ಘೋಷಣೆ ಕೂಗಲಾಗಿತ್ತು. ಆದರೆ ಸಂಘಪರಿವಾರ ಇದನ್ನು ಕೋಮು ಸೌಹಾರ್ದತೆಯನ್ನು ಕೆಡವಿ ರಾಜಕೀಯ ಲಾಭವನ್ನು ಪಡೆದುಕೊಳ್ಳುತ್ತಿದೆ. ಜೊತೆಗೆ ಸೋಮವಾರ ಶನಿವಾರಸಂತೆ ಬಂದ್ ಗೆ ಕರೆ ನೀಡಿದೆ.

Join Whatsapp