ನವದೆಹಲಿ: ವಿಶ್ವಸಂಸ್ಥೆಯ ಕಾನ್ಫರೆನ್ಸ್ ಆಫ್ ಪಾರ್ಟೀಸ್(ಸಿಒಪಿ-28) ಜೊತೆಗೆ ನಡೆಯಲಿರುವ ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯ ವೇಳೆ ಕತಾರ್ ದೊರೆ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರನ್ನು ಶುಕ್ರವಾರ ಭೇಟಿಯಾಗಿ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ.
ಕತಾರ್ ದೊರೆ ಅವರೊಂದಿಗಿನ ಚಿತ್ರವನ್ನು ಪ್ರಧಾನಿ ಮೋದಿ ಹಂಚಿಕೊಂಡಿದ್ದು, ದ್ವಿಪಕ್ಷೀಯ ಪಾಲುದಾರಿಕೆಯ ಸಾಧ್ಯತೆ ಮತ್ತು ಕತಾರ್ ನಲ್ಲಿರುವ ಭಾರತೀಯರ ಯೋಗಕ್ಷೇಮದ ಕುರಿತು ಧನಾತ್ಮಕ ಚರ್ಚೆ ನಡೆಸಿರುವುದಾಗಿ ಮೋದಿ ತಿಳಿಸಿದ್ದಾರೆ.
On the sidelines of the #COP28 Summit in Dubai yesterday, had the opportunity to meet HH Sheikh @TamimBinHamad, the Amir of Qatar. We had a good conversation on the potential of bilateral partnership and the well-being of the Indian community in Qatar. pic.twitter.com/66a2Zxb6gP
— Narendra Modi (@narendramodi) December 2, 2023