ದ.ಕ ಜಿಲ್ಲೆಯಲ್ಲಿ ಪ್ರತಿ ಮಂಗಳವಾರ, ಶುಕ್ರವಾರ ಕೋರ್ಬಿವ್ಯಾಕ್ಸ್ (ಕೋವಿಡ್-19) ಲಸಿಕೆ ಲಭ್ಯ

Prasthutha|

ಮಂಗಳೂರು: ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತೀ ಮಂಗಳವಾರ ಮತ್ತು ಶುಕ್ರವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆಯನ್ನು ನೀಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ತಾಲೂಕು ಆಸ್ಪತ್ರೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಹಾಗೂ ಸುಳ್ಯ ಇಲ್ಲಿ ಕೋರ್ಬಿವ್ಯಾಕ್ಸ್ ಲಸಿಕೆ ಲಭ್ಯವಿದ್ದು, ಸಾರ್ವಜನಿಕರು https://www.cowin.gov.in/ ಮೂಲಕ ನೋಂದಾಯಿಸುವಂತೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಲಸಿಕೆಯನ್ನು ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಯ 2 ನೇ ಡೋಸ್ ಪಡೆದು 6 ತಿಂಗಳು ಅಥವಾ 26 ವಾರ ಪೂರೈಸಿದವರು ಹಾಗೂ 18 ವರ್ಷ ಮೇಲ್ಪಟ್ಟವರು, ಮುನ್ನೆಚ್ಚರಿಕೆ ಡೋಸ್ ಪಡೆಯದ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು,ಮತ್ತು ಆರೋಗ್ಯ ಕಾರ್ಯಕರ್ತರು ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆಯನ್ನು ಪಡೆಯಬಹುದಾಗಿದೆ.



Join Whatsapp