ಒಡಿಶಾ ರೈಲು ದುರಂತ : ಇಂದಿನಿಂದ ಸಂಚಾರ ಆರಂಭಿಸಲಿದೆ ಕೋರಮಂಡಲ್ ಎಕ್ಸ್‌ಪ್ರೆಸ್

Prasthutha|

ಭುವನೇಶ್ವರ: ಒಡಿಶಾದ ಬಾಲಸೋರ್​ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 288 ಕ್ಕೆ ಏರಿಕೆಯಾಗಿದೆ ಎಂದು ಒಡಿಶಾ ಸರ್ಕಾರ ಮಂಗಳವಾರ ತಿಳಿಸಿದೆ. ಹಲವಾರು ಮೃತದೇಹಗಳನ್ನು ಪರಿಶೀಲಿಸಿ ಅವರ ಸಂಬಂಧಿಕರಿಗೆ ಹಸ್ತಾಂತರಿಸಿದ ನಂತರ ಇದೀಗ ಸಾವಿನ ಸಂಖ್ಯೆ ಹೆಚ್ಚಿರುವುದು ತಿಳಿದುಬಂದಿದೆ. ಹೌರಾ-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಒಳಗೊಂಡ ಸರಣಿ ಅಪಘಾತದಲ್ಲಿ ಸಾವನ್ನಪ್ಪಿದ 288 ಮಂದಿಯ ಪೈಕಿ 205 ಮೃತದೇಹಗಳನ್ನು ಇದುವರೆಗೆ ಗುರುತಿಸಲಾಗಿದೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೆನಾ ತಿಳಿಸಿದ್ದಾರೆ.

- Advertisement -

83 ಅಪರಿಚಿತ ಶವಗಳನ್ನು ಗುರುತಿಸಲು ಬಾಕಿ ಇದ್ದು, ಭುವನೇಶ್ವರದ ಏಮ್ಸ್ ಮತ್ತು ಇತರ ಆಸ್ಪತ್ರೆಗಳಲ್ಲಿ ಇರಿಸಲಾಗಿದೆ. ಸರ್ಕಾರ ಬಿಡುಗಡೆ ಮಾಡಿದ ಸಹಾಯವಾಣಿ ಸಂಖ್ಯೆಗಳಲ್ಲಿ ನಾವು ಅನೇಕ ಪ್ರಶ್ನೆಗಳನ್ನು ಸ್ವೀಕರಿಸಿದ್ದೇವೆ. ಎಲ್ಲಾ ದೇಹಗಳನ್ನು ಗುರುತಿಸಲಾಗುವುದು. ಈ ಬಗ್ಗೆ ನಾವು ಆಶಾವಾದಿಗಳಾಗಿದ್ದೇವೆ ಎಂದು ಅವರು ಹೇಳಿದ್ದಾರೆ.

ಇಂದಿನಿಂದ(ಬುಧವಾರ) ಕೋರಮಂಡಲ್ ಎಕ್ಸ್​ಪ್ರೆಸ್ ಸಂಚಾರ ಪುನರಾರಂಭ

- Advertisement -

ರೈಲು ದುರಂತದ ಐದು ದಿನಗಳ ನಂತರ ಕೋರಮಂಡಲ್ ಎಕ್ಸ್‌ಪ್ರೆಸ್ ತನ್ನ ಪ್ರಯಾಣವನ್ನು ಜೂನ್ 7 ರಂದು ಪುನರಾರಂಭಿಸಲಿದೆ. ರೈಲು ಇಂದು(ಬುಧವಾರ) ಮಧ್ಯಾಹ್ನ 3:30 ಕ್ಕೆ ಶಾಲಿಮಾರ್‌ನಿಂದ ಚೆನ್ನೈಗೆ ಹೊರಡುವ ಸಾಧ್ಯತೆಯಿದೆ.

ಈ ಮಧ್ಯೆ, ರೈಲು ದುರಂತದ ಸ್ಥಳಕ್ಕೆ ಭೇಟಿ ನೀಡಿರುವ ಸಿಬಿಐ, ಈಗಾಗಲೇ ತನಿಖಾ ಪ್ರಕ್ರಿಯೆ ಆರಂಭಿಸಿದೆ.

Join Whatsapp