ಶ್ರೀ ರಾಮ ಟ್ರಸ್ಟ್ ಶಾಲೆಯಲ್ಲಿ ಕೊರೋನಾ ಸ್ಪೋಟ:37 ವಿದ್ಯಾರ್ಥಿಗಳಿಗೆ ಪಾಸಿಟಿವ್

Prasthutha|

ಮಡಿಕೇರಿ: ಕೊಡಗಿನಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಗುತ್ತಿದ್ದು,ನಾಪೆÇೀಕ್ಲುವಿನ ಶ್ರೀ ರಾಮ ಟ್ರಸ್ಟ್ ಶಾಲೆಯಲ್ಲಿ ಕೊರೋನಾ ಸ್ಪೋಟಗೊಂಡಿದೆ. ಶಾಲೆಯ 37 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢ ಪಡುವ ಮೂಲಕ ಜಿಲ್ಲೆಯ ಜನತೆಯಲ್ಲಿ ಆತಂಕ ಮೂಡಿಸಿದೆ.

- Advertisement -


ನಿನ್ನೆ 125 ವಿದ್ಯಾರ್ಥಿಗಳಿಗೆ ನಡೆಸಲಾಗಿದ್ದ ಗಂಟಲ ದ್ರವ ಮಾದರಿ ಪರೀಕ್ಷೆ ನಡೆಸಲಾಗಿತ್ತು, ಸದ್ಯ ಶಾಲೆಯ 37 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದ್ದು, 384 ವಿದ್ಯಾರ್ಥಿಗಳಿರುವ ಶಿಕ್ಷಣ ಸಂಸ್ಥೆಯ ಉಳಿದ ವಿದ್ಯಾರ್ಥಿಗಳಿಗೆ ಇಂದು ಕೂಡ ಪರೀಕ್ಷೆ ನಡೆಸಿದ್ದು ಸೋಂಕಿತರ ಸಂಖ್ಯೆ ಹೆಚ್ಚಗುವ ಸಾಧ್ಯತೆ ಇದೆ.

ಇನ್ನೂ ಸೋಂಕಿತರ ಸಂಖ್ಯೆ ಹೆಚ್ಚದ ಹಿನ್ನೆಲೆಯಲ್ಲಿ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯನ್ನು ಒಂದು ವಾರ ಸೀಲ್ ಡೌನ್ ಮಾಡಲಾಗಿದೆ. ಇನ್ನೂ ಶಾಲೆಯ ಶಿಕ್ಷಕ ಮತ್ತು ಸಿಬ್ಬಂದಿ ವೃಂದದವರಿಗೂ ಕೂಡ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.



Join Whatsapp