ದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಕೊರೊನಾ ಸೋಂಕು ದೃಢವಾಗಿದೆ.
ಈ ಬಗ್ಗೆ ಕೇಜ್ರಿವಾಲ್ ಟ್ವೀಟ್ ಮಾಡಿದ್ದು, ನನಗೆ ಕೊರೋನಾದ ಸೌಮ್ಯ ಲಕ್ಷಣಗಳು ಇವೆ. ಕಳೆದ ಕೆಲವು ದಿನಗಳಿಂದಲೂ ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಕೋವಿಡ್- 19 ತಪಾಸಣೆ ಮಾಡಿಸಿಕೊಳ್ಳಿ. ಐಸೋಲೇಟ್ ಆಗಿ ಎಂದು ಮನವಿ ಮಾಡಿದ್ದಾರೆ. ನನಗೆ ಕೊವಿಡ್ 19 ಸೋಂಕು ತಗುಲಿದೆ ಎಂದಷ್ಟೇ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಹಾಗಾಗಿ, ಒಮಿಕ್ರಾನ್ ಸೋಂಕಿಗೆ ಒಳಗಾಗಿದ್ದಾರೋ, ಅಥವಾ ಕೊರೋನಾ ಸೋಂಕೋ ಎಂಬುದಿನ್ನೂ ದೃಢಪಟ್ಟಿಲ್ಲ. ಸದ್ಯ ಅರವಿಂದ್ ಕೇಜ್ರಿವಾಲ್ ಐಸೋಲೇಟ್ ಆಗಿದ್ದಾರೆ.