ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಇಳಿಕೆಯಾಗಿದೆ. ಇಂದು ಸಾವಿನ ಸಂಖ್ಯೆ ಹೆಚ್ಚಾಗಿದೆ.ಬಾಗಲಕೋಟೆ,ಬೆಳಗಾವಿ,ಬೆಂಗಳೂರು ಗ್ರಾಮಾಂತರ,, ಬೀದರ್, ಚಾಮರಾಜನಗರ,ಚಿಕ್ಕಬಳ್ಳಾಪುರ, ದಾವಣಗೆರೆ,ಧಾರವಾಡ, ಗದಗ, ಹಾಸನ, ಹಾವೇರಿ, ಕೊಪ್ಪಳ,ಮಂಡ್ಯ,ರಾಯಚೂರು, ಉಡುಪಿ,ಉತ್ತರ ಕನ್ನಡ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕು ದೃಢಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 106 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ. 0.45 ಕ್ಕೆ ಇಳಿಕೆಯಾಗಿದೆ. ಸೋಂಕಿನಿಂದ ಸಾವನ್ನಪ್ಪಿದವರ ಪ್ರತಿಶತ ಸಂಖ್ಯೆ ಶೇ3.77 ರಷ್ಟು ಇದೆ.
ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,420 ಕ್ಕೆ ಇಳಿಕೆಯಾಗಿದೆ. ಇಂದು 4 ಮಂದಿ ಸಾವನ್ನಪ್ಪಿದ್ದಾರೆ ಅವಧಿಯಲ್ಲಿ 337 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ
ರಾಜಧಾನಿಯಲ್ಲಿ ಸೋಂಕು ಇಳಿಕೆ
ಬೆಂಗಳೂರಿನಲ್ಲಿ ಹಲವು ದಿನಗಳ ಬಳಿಕ ಕಡಿಮೆ ಸೋಂಕು ದೃಢಪಟ್ಟಿದೆ. ಇಂದು 112 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ರಾಜಧಾನಿಯಲ್ಲಿ ಇಂದು 87 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. 2 ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ಸೋಂಕು ಸೇರಿದಂತೆ ಇಲ್ಲಿಯ ತನಕ ಒಟ್ಟು ಸೋಂಕಿತರ ಸಂಖ್ಯೆ 39,43,912 ಕ್ಕೆ ಏರಿಕೆಯಾಗಿದೆ. ಇಲ್ಲಿಯ ತನಕ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,010,430 ಕ್ಕೆ ಏರಿಕೆಯಾಗಿದೆ.ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 40,0022 ಕ್ಕೆ ಏರಿಕೆ.
23 ಸಾವಿರ ಮಂದಿಗೆ ಪರೀಕ್ಷೆ:
ರಾಜ್ಯದಲ್ಲಿ ಇಂದು 23,050 ಮಂದಿಗೆ ಪರೀಕ್ಷೆ ನಡೆಸಲಾಗಿದ್ದು ಇಲ್ಲಿಯತನಕ ಒಟ್ಟಾರೆಯಾಗಿ 6,50,95,838 ಮಂದಿಗೆ ಪರೀಕ್ಷೆ ನಡೆಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.