ಮತ್ತೆ ಗರಿಗೆದರಿದ ಕೊರೋನಾ; ಸಿ ಎಂ ನೇತೃತ್ವದಲ್ಲಿ ತುರ್ತು ಸಭೆ: ಡಾ.ಕೆ.ಸುಧಾಕರ್

Prasthutha|

ಬೆಂಗಳೂರು: ಕೊರೊನಾ ರೂಪಾಂತರಿ ಒಮಿಕ್ರಾನ್‌ ನ ಉಪತಳಿಯ ಹೊಸ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ತುರ್ತು ಸಭೆ ಕರೆಯಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದರ ಅವರು, ‘ಇಂದು ಸಿಎಂ ನೇತೃತ್ವದಲ್ಲಿ ತುರ್ತು ಸಭೆ ಕರೆದಿದ್ದೇವೆ. ಪ್ರಧಾನಿ ಮೋದಿ ಅವರು ಎಲ್ಲಾ ರಾಜ್ಯಗಳ ಆರೋಗ್ಯ ಅಧಿಕಾರಿಗಳು ಮತ್ತು ತಾಂತ್ರಿಕ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಲಿದ್ದಾರೆ’ ಎಂದು ಹೇಳಿದರು.


ಮೋದಿಯವರ ನಿರ್ದೇಶನಗಳ ಆಧಾರದ ಮೇಲೆ ರಾಜ್ಯ ಸರ್ಕಾರವು ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸುತ್ತದೆ ಎಂದು ಸುಧಾಕರ್ ತಿಳಿಸಿದರು.

- Advertisement -


ದೇಶದಲ್ಲಿ ಕೊರೊನಾ ವೈರಸ್‌ ಓಮೈಕ್ರಾನ್‌ನ ಉಪತಳಿ ಬಿಎಫ್‌.7 ಸೋಂಕಿನ ನಾಲ್ಕು ಪ್ರಕರಣಗಳು ಜುಲೈ, ಸೆಪ್ಟೆಂಬರ್ ಮತ್ತು ನವೆಂಬರ್‌ನಲ್ಲಿ ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.

Join Whatsapp