ರಾಜ್ಯದಲ್ಲಿ ಕೊರೋನಾ, ಓಮಿಕ್ರಾನ್ ಹೆಚ್ಚಳ: ನಾಳೆ ಸಂಜೆ ತಜ್ಞರ ಜೊತೆ ಸಿಎಂ ಸಭೆ, ಕಠಿಣ ಕ್ರಮ ಜಾರಿ?

Prasthutha|

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಓಮಿಕ್ರಾನ್ ಹೆಚ್ಚಳವಾಗುತ್ತಿದ್ದು, ಸೋಂಕಿನ ಬಗ್ಗೆ ತೀವ್ರ ನಿಗಾ ಇಡಲಾಗಿದೆ. ಒಮಿಕ್ರಾನ್ ಅತಿ ವೇಗವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ನಾಳೆ ಸಂಜೆ ತಜ್ಞರೊಂದಿಗೆ ನಭೆ ನಡೆಸಿ ಕೋವಿಡ್ ಮತ್ತು ಒಮಿಕ್ರಾನ್ ತಡೆಯುವ ಕುರಿತು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

- Advertisement -

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಕ್ಕಪಕ್ಕ ರಾಜ್ಯಗಳಲ್ಲಿ ಹಾಗೂ ಕರ್ನಾಟಕಲ್ಲಿ ಕಳೆದೊಂದು ವಾರದಲ್ಲಿ ಕೋವಿಡ್-19 ಹಾಗೂ ಓಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಯಾವ ರೀತಿ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ತಜ್ಞರ ಜೊತೆ ಚರ್ಚೆಯ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಹಲವು ಕ್ರಮಗಳ ಅಗತ್ಯವನ್ನು ಮನಗಂಡು ತಜ್ಞರ ಜೊತೆ ಮಾತುಕತೆ,ಚರ್ಚೆ ನಡೆಸುತ್ತೇವೆ.ಅವರು ನೀಡಿದ ಸಲಹೆಗಳ ಆಧಾರದ ಮೇಲೆ ಗುರುವಾರ ಸಂಪುಟ ಸಹೋದ್ಯೋಗಿಗಳ ಜೊತೆ ಸಚಿವ ಸಂಪುಟ ನಡೆಸಿ ಚರ್ಚಿಸುತ್ತೇನೆ. ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಒಟ್ಟಾರೆ ಸ್ಥಿತಿಗತಿ, ತೆಗೆದುಕೊಳ್ಳಬೇಕಾದ ದೀರ್ಘಾವಧಿ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

Join Whatsapp