ಸಿಎಂ ಬೊಮ್ಮಾಯಿ ಮತ್ತವರ ಪುತ್ರನಿಗೂ ಕೊರೋನಾ ಪಾಸಿಟಿವ್: ಇಬ್ಬರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ
Prasthutha: January 11, 2022

ಬೆಂಗಳೂರು: ಕೊರೋನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ನಗರದ ಹಳೆ ಮದ್ರಾಸ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಪರೀಕ್ಷೆ, ಚಿಕಿತ್ಸೆಗೆ ಒಳಪಡಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿಗೂ ಕೋವಿಡ್ ಪಾಸಿಟಿವ್ ಆಗಿದೆ. ರೋಗ ಲಕ್ಷಣ ಇರುವ ಬಗ್ಗೆ ಟ್ವೀಟ್ ಮೂಲಕ ಭರತ್ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಬಸವರಾಜ ಬೊಮ್ಮಾಯಿಗೆ ಕೊರೋನಾ ದೃಢ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು.
ಶೀಘ್ರವೇ ಗುಣಮುಖರಾಗುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಸಿದ್ದರಾಮಯ್ಯ ಹಾರೈಸಿದರು. ಇನ್ನು ಸಿದ್ದರಾಮಯ್ಯ ಕರೆ ಮಾಡಿದ್ದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಧನ್ಯವಾದ ತಿಳಿಸಿದರು.
