ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಕೊರೋನಾ ಪಾಸಿಟಿವ್: ಆಸ್ಪತ್ರೆಗೆ ದಾಖಲು

Prasthutha|

ಬೆಂಗಳೂರು: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

ದೇವೇಗೌಡರು ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಎರಡನೇ ಅಲೆಯಲ್ಲೂ ಕೂಡ  ದೇವೇಗೌಡರಿಗೆ ಕೊರೋನಾ ಸೋಂಕು ತಗುಲಿತ್ತು. ಕೆಮ್ಮು ಇದ್ದ ಹಿನ್ನೆಲೆ ಕೋವಿಡ್ ಪರೀಕ್ಷೆ ಮಾಡಿಸಿದ್ದರು. ಈ ವೇಳೆ ಕೊರೋನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ.

ದೇವೇಗೌಡರಿಗೆ ಕೋವಿಡ್ ಪಾಸಿಟಿವ್ ಬಂದಿರುವ ವಿಚಾರಕ್ಕೆ ಸಂಬಂಧಿಸಿ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ಮಾಜಿ ಪ್ರಧಾನಮಂತ್ರಿಗಳು, ಹಿರಿಯರಾದ ಶ್ರೀ ದೇವೇಗೌಡ ಅವರು ಕೊರೋನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Join Whatsapp