ಮಡಿಕೇರಿ | ಸ್ಟೇಟ್ ಬ್ಯಾಂಕ್ ಸಿಬ್ಬಂದಿಗೆ ಕೊರೋನಾ ಪಾಸಿಟಿವ್

Prasthutha|

►ಬ್ಯಾಂಕ್  ಸೀಲ್‌ ಡೌನ್‌, ಗ್ರಾಹಕರು ಪರದಾಟ

- Advertisement -

ಮಡಿಕೇರಿ:  ಬ್ಯಾಂಕ್‌  ಶಾಖೆಯೊಂದರ ಎಲ್ಲಾ ಸಿಬ್ಬಂದಿಗೆ ಸೋಂಕು ತಗುಲಿರುವುದರಿಂದ ಬ್ಯಾಂಕ್‌ ಸೀಲ್‌ ಡೌನ್‌ ಮಾಡಿರುವ ಘಟನೆ ಜಿಲ್ಲೆಯ ಸೋಮವಾರಪೇಟೆ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.

ಸೋಮವಾರಪೇಟೆ ಪಟ್ಟಣದಲ್ಲಿ ಇರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯ ಎಲ್ಲಾ ಸಿಬ್ಬಂದಿಗೂ ಸೋಂಕು ದೃಢಪಟ್ಟಿದೆ. ಪರಿಣಾಮವಾಗಿ ಕಳೆದ ಮೂರು ದಿನಗಳಿಂದ ಬ್ಯಾಂಕ್ ಮುಚ್ಚಿದೆ. ವಹಿವಾಟಿಗೆ ಬ್ಯಾಂಕ್ ಇಲ್ಲದೇ ಗ್ರಾಹಕರು ಪರದಾಡುತ್ತಿದ್ದಾರೆ.

- Advertisement -

ಪಟ್ಟಣದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇಂದು ಒಂದೇ ದಿನ ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಸುಮಾರು 25 ಜನರಲ್ಲಿ ಸೋಂಕು ಪತ್ತೆಯಾಗಿದೆ.



Join Whatsapp