ಕರ್ನಾಟಕದ ಒಟ್ಟು ಹತ್ತು ಸಾವಿರ ಪೊಲೀಸ್ ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್!

Prasthutha|

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆಗೆ ಇಡೀ ದೇಶವೇ ತತ್ತರಿಸಿ ಹೋಗಿದ್ದು, ರಾಜ್ಯದಲ್ಲಿ ಕಳೆದ 2020ರ ಏಪ್ರಿಲ್ ತಿಂಗಳಿನಿಂದ ಈವರೆಗೂ 9,990 ಪೊಲೀಸ್ ಸಿಬ್ಬಂದಿ ಹಾಗೂ ಹೋಮ್ ಗಾರ್ಡ್ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದ್ದು, 107 ಭದ್ರತಾ ಸಿಬ್ಬಂದಿಗಳು ಕೊವಿಡ್-19 ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

- Advertisement -

ರಾಜ್ಯದಲ್ಲಿ ಈವರೆಗೆ ಪ್ರತಿನಿತ್ಯ 27 ಮಂದಿ ಪೊಲೀಸ್ ಸಿಬ್ಬಂದಿ ಹಾಗೂ ಹೋಮ್ ಗಾರ್ಡ್ ಸಿಬ್ಬಂದಿಗೆ ಸೋಂಕು ತಗುಲಿದೆ ಎನ್ನಲಾಗಿದೆ.

ಕರ್ನಾಟಕದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬವನ್ನು ಕೊವಿಡ್-19 ಮಹಾಮಾರಿಯಿಂದ ರಕ್ಷಿಸುವುದಕ್ಕಾಗಿ ಬಹುಪಾಲು ಸಿಬ್ಬಂದಿಗೆ ಲಸಿಕೆ ನೀಡಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಭದ್ರತಾ ಸಿಬ್ಬಂದಿಗೆ ಕೊರೋನಾ ಲಸಿಕೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

- Advertisement -

ಅಂಕಿ-ಅಂಶದ ಪ್ರಕಾರ ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಮೊದಲ ಅಲೆಯ ಸಂದರ್ಭದಲ್ಲಿ 9,695 ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿದೆ. ಎರಡನೇ ಅಲೆಯಲ್ಲಿ ಏಪ್ರಿಲ್ 1ರವರೆಗಿನಿಂದ 295 ಭದ್ರತಾ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ ಎಂದು ಆಡಳಿತ ವಿಭಾಗದ ಪೊಲೀಸ್ ಮಹಾನಿರ್ದೇಶಕ ಎಂ ಎ ಸಲೀಂ ತಿಳಿಸಿದ್ದಾರೆ.



Join Whatsapp