ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ಗೆ ಕೊರೊನಾ ಪಾಸಿಟಿವ್

Prasthutha|

- Advertisement -

ನವದೆಹಲಿ : ದೇಶಾದ್ಯಂತ ಕೊರೊನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಇದೀಗ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೂಡ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜನಾಥ್ ಸಿಂಗ್, ಕೊರೊನಾ ಟೆಸ್ಟ್ ನಲ್ಲಿ ನನಗೆ ಸೋಂಕು ದೃಢಪಟ್ಟಿದ್ದು, ಲಘು ಲಕ್ಷಣಗಳು ಕಂಡುಬಂದಿದೆ. ಹಾಗಾಗಿ ವೈದ್ಯರ ಸಲಹೆ ಮೇರೆಗೆ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

- Advertisement -

ಹಾಗೆಯೇ ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಹಾಗೂ ಐಸೋಲೇಷನ್ ಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.



Join Whatsapp