ಕೊರೊನಾ 2 ನೇ ಅಲೆ ಇನ್ನೂ 40 ದಿನ ಇರಲಿದೆ : ಆರೋಗ್ಯ ಸಚಿವ ಡಾ.ಕೆ ಸುಧಾಕರ್

Prasthutha|

ಬೆಂಗಳೂರು :  ಕೊರೋನಾದಿಂದ ಕಂಗಾಲಾಗಿರುವ ರಾಜ್ಯದ ಜನತೆಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಕೊರೊನಾ ಎರಡನೇ ಅಲೆ 40 ದಿನ ಇರಲಿದೆ ಎಂದು ತಜ್ಞರು ಹೇಳಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

- Advertisement -

“ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಇನ್ನೂ 40 ದಿನ ಇರಲಿದೆ ಎಂದು ತಜ್ಞರು ಹೇಳಿದ್ದಾರೆ ಅಲ್ಲಿಯವರೆಗೂ ಮನೆಯಲ್ಲೇ ಇರೋದು ಸೂಕ್ತ. ಮೊದಲ ಅಲೆಗಿಂತ ಎರಡನೇ ಅಲೆಯಲ್ಲಿ ಹೆಚ್ಚು ಜನ ಸೋಂಕಿತರಾಗಿದ್ದಾರೆ” ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್ ಹೇಳಿದ್ದಾರೆ.

ಈಗ ಕೊರೊನಾ ರೋಗದ ಲಕ್ಷಣ ಇಲ್ಲದಿದ್ದರೂ ಪಾಸಿಟಿವ್ ವರದಿಗಳು ಬರುತ್ತಿದೆ. ಆಸ್ಪತ್ರೆಗೆ ಬರುವವರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಆರೋಗ್ಯ ವ್ಯವಸ್ಥೆ ಮೇಲೆ ಹೆಚ್ಚಿನ ಹೊರೆ ಬೀಳುತ್ತಿದೆ. ರೋಗಲಕ್ಷಣ ಇಲ್ಲದ ಸೋಂಕಿತರು ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುವಂತೆ ಸಚಿವರು ಮನವಿ ಮಾಡಿದ್ದಾರೆ.

Join Whatsapp