ನವದೆಹಲಿ: ಇಂದಿನಿಂದ ದೇಶಾದ್ಯಂತ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್-19 ಲಸಿಕಾ ಅಭಿಯಾನವು ಪ್ರಾರಂಭವಾಗಿದೆ.
ದೇಶದಲ್ಲಿ ಕೋವಿಡ್ ಮೂರನೇ ಅಲೆಯ ಆತಂಕ ಹೆಚ್ಚುತ್ತಿರುವ ಹಿನ್ನೆಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಡಿಸೆಂಬರ್ 25, 2021 ರಂದು, ಮಕ್ಕಳಿಗೆ ಕೊರೊನಾ ಲಸಿಕೆ ಹಾಗೂ ಹಿರಿಯ ನಾಗರಿಕರಿಗೆ ಬೂಸ್ಟರ್ ಡೋಸ್ ನೀಡುವ ಮಹತ್ವದ ಘೋಷಣೆ ಮಾಡಿದ್ದರು. ಹೀಗಾಗಿ, ಜನವರಿ 3 ರಿಂದ ದೇಶಾದ್ಯಂತ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಗುತ್ತಿದೆ.
ಈ ಕುರಿತು ಮಾಹಿತಿ ನಿಡಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಪ್ರಸ್ತುತ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುತ್ತದೆ. Co-WIN ಪೋರ್ಟಲ್ ನಲ್ಲಿ ಶನಿವಾರದಿಂದವೇ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯವು ಹೊರಡಿಸಿದ ಮಾರ್ಗಸೂಚಿಗಳ ಅನ್ವಯ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ.