ಇಂದಿನಿಂದ 15-18 ವರ್ಷದೊಳಗಿನ ಮಕ್ಕಳಿಗೆ ಕೊರೋನಾ ಲಸಿಕೆ ಪ್ರಾರಂಭ

Prasthutha|

ನವದೆಹಲಿ: ಇಂದಿನಿಂದ ದೇಶಾದ್ಯಂತ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್-19 ಲಸಿಕಾ ಅಭಿಯಾನವು ಪ್ರಾರಂಭವಾಗಿದೆ.

- Advertisement -

ದೇಶದಲ್ಲಿ ಕೋವಿಡ್ ಮೂರನೇ ಅಲೆಯ ಆತಂಕ ಹೆಚ್ಚುತ್ತಿರುವ ಹಿನ್ನೆಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಡಿಸೆಂಬರ್ 25, 2021 ರಂದು, ಮಕ್ಕಳಿಗೆ ಕೊರೊನಾ ಲಸಿಕೆ ಹಾಗೂ ಹಿರಿಯ ನಾಗರಿಕರಿಗೆ ಬೂಸ್ಟರ್ ಡೋಸ್ ನೀಡುವ ಮಹತ್ವದ ಘೋಷಣೆ ಮಾಡಿದ್ದರು. ಹೀಗಾಗಿ, ಜನವರಿ 3 ರಿಂದ ದೇಶಾದ್ಯಂತ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಗುತ್ತಿದೆ.

ಈ ಕುರಿತು ಮಾಹಿತಿ ನಿಡಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಪ್ರಸ್ತುತ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುತ್ತದೆ. Co-WIN ಪೋರ್ಟಲ್‌ ನಲ್ಲಿ ಶನಿವಾರದಿಂದವೇ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯವು ಹೊರಡಿಸಿದ ಮಾರ್ಗಸೂಚಿಗಳ ಅನ್ವಯ ಲಸಿಕೆ ನೀಡಲಾಗುವುದು  ಎಂದು ಹೇಳಿದ್ದಾರೆ.

Join Whatsapp