ಶಾಸಕಿ ಸೌಮ್ಯ ರೆಡ್ಡಿಗೆ ವಕ್ಕರಿಸಿದ ಕರೋನ ಸೋಂಕು | ಈ ಬಗ್ಗೆ ಅವರು ಹೇಳಿದ್ದೇನು?

Prasthutha: March 27, 2021

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಬೆಂಗಳೂರಿನ ಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಶಾಸಕಿ ಸೌಮ್ಯ ರೆಡ್ಡಿ, ನನಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಿಂದ ನನ್ನ ಜೊತೆಗೆ ಸಂಪರ್ಕದಲ್ಲಿದ್ದ ಎಲ್ಲರೂ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಕೋವಿಡ್ 2ನೇ ಅಲೆಯ ತೀವ್ರತೆ ಹೆಚ್ಚುತ್ತಿದ್ದು, ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮಕೈಗೊಂಡು ಮಾಸ್ಕ್ ಧರಿಸಿ. ಎಲ್ಲರಿಗೂ ಲಸಿಕೆ ನೀಡುವ ವಿಧಾನವನ್ನು ತ್ವರಿತಗೊಳಿಸಬೇಕೆಂದು ನಾನು ಸರ್ಕಾರಕ್ಕೆ ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

ಕೋವಿಡ್ ರೋಗಲಕ್ಷಣಗಳು ಹೆಚ್ಚಿಲ್ಲದಿದ್ದರು ಸಹ ನನಗೆ ಈ ಹಿಂದೆ ಅಸ್ತಮಾ ಇದ್ದ ಕಾರಣ, ಪಾಲಕರ ಸೂಚನೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಸಾರ್ವಜನಿಕರಿಗೆ ಕ್ಷೇತ್ರದಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ತನ್ನ ಕಚೇರಿಗೆ ಕರೆ ಮಾಡುವಂತೆಯೂ ಅವರು ಹೇಳಿಕೊಂಡಿದ್ದಾರೆ.

ಲಾಕ್ ಡೌನ್ ಸಂಕಷ್ಟದಿಂದ ಇನ್ನೂ ಜನತೆ ಹೊರಬಂದಿಲ್ಲ.‌ ಸಾಕಷ್ಟು ಜನರು ಆರ್ಥಿಕ ಸಂಕಷ್ಟದಿಂದ ತತ್ತರಿಸಿರುವ ಈ ಸಮಯದಲ್ಲಿ ರಾಜ್ಯ ರಾಜಧಾನಿಯಲ್ಲಿ ಕರೋನ ಪ್ರಕರಣಗಳು ಹೆಚ್ಚಳವಾಗುತ್ತಿರುವುದು ಸದ್ಯ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!