ನವದೆಹಲಿ: 2 ರಿಂದ18 ವರ್ಷದ ಮಕ್ಕಳಿಗೆ ನೀಡುವ ಕೋವಿಡ್ ಲಸಿಕೆಗೆ ವಿಷುಯ ತಜ್ಞರ ಸಮಿತಿ(ಎಸ್ಇಸಿ), ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾಗೆ ಶಿಫಾರಸ್ಸು ಮಾಡಿದೆ.
ಕೊರೋನಾ ಸಾಂಕ್ರಾಮಿಕ ಆರಂಭವಾದಾಗಿನಿಂದ ಇಲ್ಲಿಯವರೆಗೂ ಮಕ್ಕಳಿಗೆ ಕೊರೋನಾ ಲಸಿಕೆ ಬಂದಿರಲಿಲ್ಲ. ಇದು ಬಹುತೇಕ ಎಲ್ಲ ಪೋಷಕರ ತಲೆನೋವಿಗೆ ಕಾರಣವಾಗಿತ್ತು. ಈ ನಿಟ್ಟಿನಲ್ಲಿ ಭಾರತ್ ಬಯೋಟೆಕ್ ಸಂಸ್ಥೆಯ ಕೋವ್ಯಾಕ್ಸಿನ್ ಲಸಿಕೆಯನ್ನು ಮಕ್ಕಳಿಗೆ ನೀಡುವ ಕುರಿತು ವಿಷಯ ತಜ್ಞರ ಸಮಿತಿ, ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾಗೆ ಶಿಫಾರಸ್ಸು ಮಾಡಿದೆ.
ಈ ಕುರಿತಂತೆ ವಿಷಯ ತಜ್ಞರ ಸಮಿತಿಯ ಸಭೆಯಲ್ಲಿ ಇಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಮಕ್ಕಳಿಗೂ ಕೊರೋನಾ ಲಸಿಕೆ ನೀಡಲು ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.