ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದ್ದು, 45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರೂ ಲಸಿಕೆ ಹಾಕಿಸಿಕೊಳ್ಳುವಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವ ಡಾ.ಕೆ. ಸುಧಾಕರ್, ಇಂದಿನಿಂದ 45 ವರ್ಷ ಮೇಲ್ಪಟ್ಟ ಎಲ್ಲ ನಾಗರೀಕರಿಗೂ ಲಸಿಕೆ ಲಭ್ಯವಾಗಲಿದ್ದು, 650 ಖಾಸಗಿ ಮತ್ತು 4850 ಸರ್ಕಾರಿ ಸೇರಿದಂತೆ ರಾಜ್ಯಾದ್ಯಂತ ಒಟ್ಟು 5,500 ಲಸಿಕಾ ಕೇಂದ್ರಗಳಲ್ಲಿ ಲಸಿಕೆ ವಿತರಿಸಲಾಗುತ್ತದೆ. ಬಿಬಿಎಂಪಿಗೆ 1.5 ಲಕ್ಷ ಡೋಸ್ ಲಸಿಕೆ ಪೂರೈಸಲಾಗಿದ್ದು, ಬೆಂಗಳೂರು ನಗರದಾದ್ಯಂತ ಸುಮಾರು 600 ಲಸಿಕಾ ಕೇಂದ್ರಗಳಲ್ಲಿ ಲಸಿಕೆ ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.