ಭ್ರಷ್ಟಾಚಾರ ಪ್ರಕರಣ: ಸಿಬಿಐನಿಂದ ಮಾಜಿ ಸಚಿವ ಅನಿಲ್ ದೇಶಮುಖ್ ಬಂಧನ

Prasthutha|

ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಬುಧವಾರ ಕೇಂದ್ರೀಯ ತನಿಖಾ ದಳ (ಸಿಬಿಐ) ಕಸ್ಟಡಿಗೆ ತೆಗೆದುಕೊಂಡಿದೆ.

- Advertisement -

 ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ಮುಂಬೈನ ಆರ್ಥರ್ ರೋಡ್ ಜೈಲಿನಿಂದ ಅನಿಲ್ ದೇಶಮುಖ್ ಅವರನ್ನು ಸಿಬಿಐ ಕಸ್ಟಡಿಗೆ ತೆಗೆದುಕೊಂಡಿದೆ ಎಂದು ಮುಂಬೈ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ತಿಳಿಸಿದ್ದಾರೆ.

ಇದಕ್ಕೂ ಮೊದಲು ದೇಶಮುಖ್ ಅವರು ಸಿಬಿಐ ಕಸ್ಟಡಿಗೆ ನೀಡಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಮೊರೆ ಹೋಗಿದ್ದರು.

- Advertisement -

 400 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಬಿಐ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ದೇಶಮುಖ್ ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿಯೇ ಅವರು ಆರೋಗ್ಯದ ಕಾರಣಗಳನ್ನು ಉಲ್ಲೇಖಿಸುತ್ತಿದ್ದಾರೆ ಎಂದು ಸಿಬಿಐ ನಿನ್ನೆ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ತಿಳಿಸಿತ್ತು.

ಮುಂಬೈನ ಮಾಜಿ ಪೊಲೀಸ್ ಅಧಿಕಾರಿ ಸಚಿನ್ ವಾಝೆ ಮತ್ತು ದೇಶಮುಖ್, ಕುಂದನ್ ಶಿಂಧೆ ಮತ್ತು ಸಂಜೀವ್ ಪಲಾಂಡೆ ಅವರ ಇಬ್ಬರು ಆಪ್ತ ಸಹಾಯಕರನ್ನು ಸಿಬಿಐ ವಶಕ್ಕೆ ತೆಗೆದುಕೊಂಡಿದೆ.

Join Whatsapp