ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ | ಯಡ್ಡಿ, ಈಶ್ವರಪ್ಪ ವಿರುದ್ಧ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕಿಡಿ

Prasthutha|

ಬಳ್ಳಾರಿ : ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಸಮನ್ವಯತೆಯ ಕೊರತೆ ಎದ್ದು ಕಾಣುತ್ತಿದೆ. ಅಕ್ರಮ ನಡೆದರೂ ಇಲ್ಲಿ ಹೇಳುವವರು ಕೇಳಿವವರು ಯಾರೂ ಇಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವ ಈಶ್ವರಪ್ಪ ನಾಲಾಯಕ್ ಎಂದು ಮಾಜಿ ಸಂಸದ ವಿಎಸ್ ಉಗ್ರಪ್ಪ ಮುಖ್ಯಮಂತ್ರಿಗಳ ವಿರುದ್ಧ ಕಿಡಿಕಾರಿದ್ದಾರೆ.

“ರಾಜ್ಯ ಸರ್ಕಾರದಲ್ಲಿ ಈಗ ಸಮನ್ವಯತೆಯೇ ಇಲ್ಲ. ಭ್ರಷ್ಟಾಚಾರ, ಅಕ್ರಮವೇ ತಾಂಡವವಾಡುತ್ತಿದೆ. ಈ ಸರ್ಕಾರಕ್ಕೆ ಹೇಳುವವರು ಕೇಳುವವರು ಯಾರೂ ಇಲ್ಲ. ಸ್ವತಹ ಸಚಿವ ಈಶ್ವರಪ್ಪನವರೇ ಸಿಎಂ ಯಡಿಯೂರಪ್ಪ ವಿರುದ್ಧ ಬಂಡಾಯವೆದ್ದಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಈಶ್ವರಪ್ಪ ನಾಲಾಯಕ್” ಎಂದು ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ವಾಗ್ದಾಳಿ ನಡೆಸಿದ್ದಾರೆ.

- Advertisement -