ಕರಾವಳಿಯಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ

Prasthutha|

- Advertisement -

ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಕರಾವಳಿಯಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

- Advertisement -

ಕರಾವಳಿಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಿದ್ದು, 3,4 ಮತ್ತು 5ನೇ ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಿದ್ದು, ನಾಳೆ (ಸೋಮವಾರ) ಆರೆಂಜ್ ಅಲರ್ಟ್ ಅನ್ನು ಘೋಷಿಸಲಾಗಿದೆ. ಉತ್ತರ ಒಳನಾಡಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಗುಡುಗು, ಮಿಂಚು ಸಹಿತ ಗಾಳಿ ಮಳೆಯಾಗುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Join Whatsapp