ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಅಬ್ದುಲ್ ಜಬ್ಬಾರ್ ಹಾಗೂ ನಾಗರಾಜ ಯಾದವ್ ಮಂಗಳವಾರ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಜರಿದ್ದು ಶುಭ ಕೋರಿದರು.