Home ಟಾಪ್ ಸುದ್ದಿಗಳು ಭಾರತದ ಬಹು ನಿರೀಕ್ಷಿತ ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ

ಭಾರತದ ಬಹು ನಿರೀಕ್ಷಿತ ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ

ಶ್ರೀಹರಿಕೋಟ: 2019ರಲ್ಲಿ ಚಂದ್ರಯಾನ-2ನ್ನು ಸುಲಭವಾಗಿ ಚಂದ್ರನ ಮೇಲೆ ಇಳಿಸಲು ವಿಫಲವಾದರೂ ಕೂಡ ಕುಗ್ಗದ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೊ ವಿಜ್ಞಾನಿಗಳು ಇದೀಗ ಬಹು ನಿರೀಕ್ಷಿತ ಚಂದ್ರಯಾನ-3 ಉಡಾವಣೆಗೆ ಸಜ್ಜಾಗಿದ್ದಾರೆ.


ಭಾರತೀಯ ಕಾಲಮಾನ ಇಂದು ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡ್ಡಯನವಾಗಲಿದೆ. ಇಸ್ರೊದ 6 ವಾರಗಳ ಕಾರ್ಯಾಚರಣೆ ಇಂದು ಆರಂಭವಾಗುತ್ತಿದೆ.


ಚಂದ್ರಯಾನ-3 ಲ್ಯಾಂಡರ್, ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್ ನ್ನು ಹೊಂದಿದ್ದು, ಇದು ಸುಮಾರು 3,900 ಕಿಲೋಗ್ರಾಂಗಳಷ್ಟು ಭಾರವನ್ನು ಹೊಂದಿದೆ.
ಚಂದ್ರನ ಮೇಲ್ಮೈ ಮೇಲೆ ಆಗಸ್ಟ್ 23 ಅಥವಾ 24 ರ ಸುಮಾರಿಗೆ ಲ್ಯಾಂಡಿಂಗ್ ಆಗಬಹುದು ಎಂದು ನಿರೀಕ್ಷಿಸಲಾಗಿದೆ.

Join Whatsapp
Exit mobile version