ನೂತನ ಸಚಿವರ ಪ್ರಮಾಣ ವಚನಕ್ಕೆ ಕ್ಷಣಗಣನೆ| ರಾಜಭವನದ ಬಳಿ ಸಂಪೂರ್ಣ ಪೊಲೀಸ್ ಭದ್ರತೆ

Prasthutha|

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸೇರಲಿರುವ 24 ಮಂದಿ ಸಚಿವರ ಪ್ರಮಾಣ ವಚನಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಕೆಲವೇ ಗಂಟೆಗಳಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

- Advertisement -

ಇಂದು (ಮೇ.27) ಬೆಳಗ್ಗೆ 11.45ಕ್ಕೆ ರಾಜಭವನದ ಗಾಜಿನಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ 24 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಭಾನುವಾರ ನೂತನ ಪಾರ್ಲಿಮೆಂಟ್ ಕಟ್ಟಡ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಶನಿವಾರ ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದಾರೆ.

- Advertisement -

ಇನ್ನು ರಾಜಭವನ ಸುತ್ತಮುತ್ತ ಭದ್ರತೆಗಾಗಿ 2700 ಪೊಲಿಸ್ ಸಿಬ್ಬಂಧಿಯನ್ನು ನಿಯೋಜನೆ ಮಾಡಲಾಗಿದೆ. 17 ಡಿಸಿಪಿ, 37 ಎಸಿಪಿ, 114 ಇನ್ಸ್ ಪೆಕ್ಟರ್ , 208 ಪಿಎಸ್ಐ, ಸೇರಿ 2700 ಪೊಲೀಸರನ್ನು ನಿಯೋಜಿಸಲಾಗಿದೆ. ಮಫ್ತಿಯಲ್ಲೂ 200 ಕ್ಕೂ ಅಧಿಕ ಪೊಲೀಸರು ಕಾರ್ಯ ನಿರ್ವಹಿಸಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಡಿಸ್ವಾಟ್, ವಾಟರ್ಜೆಟ್ ನಿಯೋಜನೆ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.



Join Whatsapp