ರಾಜ್ಯದಲ್ಲಿ ಮುಂಗಾರು ಆಗಮನಕ್ಕೆ ಕ್ಷಣಗಣನೆ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

Prasthutha|

- Advertisement -

ಮಂಗಳೂರು: ರಾಜ್ಯದಲ್ಲಿ ಮುಂಗಾರು ಆಗಮನಕ್ಕೆ ಕ್ಷಣಗಣನೆ ಶುರುವಾಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೂನ್ 7 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು,ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

- Advertisement -

ಬೆಂಗಳೂರಿನಲ್ಲಿ ಮೋದಕವಿದ ವಾತಾವರಣ ನಿರ್ಮಾಣವಾಗಿದೆ, ಎಚ್​ಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

Join Whatsapp