Home ಕರಾವಳಿ ರಾಜ್ಯದಲ್ಲಿ ಮುಂಗಾರು ಆಗಮನಕ್ಕೆ ಕ್ಷಣಗಣನೆ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಆಗಮನಕ್ಕೆ ಕ್ಷಣಗಣನೆ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಮಂಗಳೂರು: ರಾಜ್ಯದಲ್ಲಿ ಮುಂಗಾರು ಆಗಮನಕ್ಕೆ ಕ್ಷಣಗಣನೆ ಶುರುವಾಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೂನ್ 7 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು,ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋದಕವಿದ ವಾತಾವರಣ ನಿರ್ಮಾಣವಾಗಿದೆ, ಎಚ್​ಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

Join Whatsapp
Exit mobile version