ಹಿಜಾಬ್ ನಿಷೇಧ: ಅಂತಿಮ ತೀರ್ಪಿಗೆ ಕ್ಷಣಗಣನೆ…!!!

Prasthutha|

ಬೆಂಗಳೂರು: ರಾಜ್ಯದ ಕೆಲ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಿ ಬರದಂತೆ ಮುಸ್ಲಿಂ ವಿದ್ಯಾರ್ಥಿನಿಯರನ್ನು ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಸಂಬಂಧ ಹೈಕೋರ್ಟ್ ತೀರ್ಪು ಇಂದು ಹೊರ ಬೀಳಲಿದೆ.

- Advertisement -

ಹಿಜಾಬ್ ತೀರ್ಪು ಪ್ರಕಟ ಹಿನ್ನೆಲೆ ರಾಜ್ಯದ ಕೆಲ ಕಾಲೇಜುಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ನಿರ್ಧಾರ ಕೈಗೊಳ್ಳಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಾರ್ಚ್ 15 ರಿಂದ ಮಾರ್ಚ್ 19ರ ವರೆಗೆ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ವಿಧಿಸಿ ದ.ಕ. ಜಿಲ್ಲಾಧಿಕಾರಿ ಡಾ| ಕೆವಿ ರಾಜೇಂದ್ರ ತಿಳಿಸಿದ್ದಾರೆ. 



Join Whatsapp