ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನಕ್ಕೆ ಕ್ಷಣಗಣನೆ ಶುರುವಾಗಿದೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಧ್ಯಾಹ್ನ 12.30ಕ್ಕೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜೊತೆ 8 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಪ್ರಮಾಣ ವಚನ ಸ್ವೀಕಸಲಿರುವ ನೂತನ ಸಚಿವರು
ರಾಮಲಿಂಗಾರೆಡ್ಡಿ
ಎಂ.ಬಿ. ಪಾಟೀಲ್
ಡಾ.ಜಿ. ಪರಮೇಶ್ವರ್
ಕೆ.ಎಚ್.ಮುನಿಯಪ್ಪ
ಕೆ.ಜೆ. ಜಾರ್ಜ್
ಸತೀಶ್ ಜಾರಕಿಹೊಳಿ
ಪ್ರಿಯಾಂಕ್ ಖರ್ಗೆ
ಝಮೀರ್ ಅಹಮದ್ ಖಾನ್
ಸಿದ್ದು, ಡಿಕೆಶಿ ಪ್ರಮಾಣವಚನ ಸಮಾರಂಭಕ್ಕೆ ಭರ್ಜರಿ ಸಿದ್ಧತೆ
ಕಂಠೀರವ ಸ್ಟೇಡಿಯಂ ಸುತ್ತು ಎಲ್ಲೆಲ್ಲೂ ಸಿದ್ದರಾಮಯ್ಯ, ಡಿಕೆಶಿ ಫ್ಲೆಕ್ಸ್, ಬ್ಯಾನರ್ಗಳು ರಾರಾಜಿಸುತ್ತಿದ್ದು, ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಭಿಮಾನಿಗಳು, ಕಾರ್ಯಕರ್ತರು. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಆಗಮಿಸುತ್ತಿದ್ದಾರೆ
ಸಿಇಟಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಿಂಡಿ, ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದೆ.
ಪ್ರಮಾಣವಚನ ಸಮಾರಂಭದಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಂಭವವಿದೆ. ಒಂದು ವೇಳೆ ವಿದ್ಯಾರ್ಥಿಗಳು ಸಂಚಾರ ದಟ್ಟಣೆಗೆ ಸಿಲುಕಿಕೊಂಡಲ್ಲಿ ಪರೀಕ್ಷಾ ಪ್ರವೇಶಪತ್ರವನ್ನು ಪೊಲೀಸರಿಗೆ ತೋರಿಸಬೇಕು. ಪೊಲೀಸರು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಅಗತ್ಯ ವ್ಯವಸ್ಥೆ ಮಾಡುತ್ತಾರೆ.