ಕಾಂಗ್ರೆಸ್ ಅಧ್ಯಕ್ಷೀಯ ಸ್ಥಾನಕ್ಕೆ ಮತ ಎಣಿಕೆ ಆರಂಭ: ಮೂರು ರಾಜ್ಯಗಳಲ್ಲಿ ಅಕ್ರಮ ಆರೋಪ

Prasthutha|

ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆಯ ಮತ ಎಣಿಕೆ ನವದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಬೆಳಿಗ್ಗೆ ಸುಮಾರು 10.20ಕ್ಕೆ ಪ್ರಕ್ರಿಯೆ ಆರಂಭವಾಗಿದೆ.

- Advertisement -

ಈ ಮಧ್ಯೆ ಮೂರು ರಾಜ್ಯಗಳ ಮತದಾನದಲ್ಲಿ ಅಕ್ರಮ ನಡೆದಿದೆ ಎಂದು ತರೂರ್ ಬಣ ಆರೋಪಿಸಿರುವುದಾಗಿ ವರದಿಯಾಗಿದೆ. ಉತ್ತರ ಪ್ರದೇಶ, ಪಂಜಾಬ್, ತೆಲಂಗಾಣದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ.

ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ತಿರುವನಂತಪುರ ಸಂಸದ ಶಶಿ ತರೂರ್ ಮಧ್ಯೆ, ಯಾರು ಕಾಂಗ್ರೆಸ್ ಅಧ್ಯಕ್ಷರಾಗಲಿದ್ದಾರೆ ಎಂಬುದು ಇಂದು ತೀರ್ಮಾನವಾಗಲಿದೆ.



Join Whatsapp