ನರೇಂದ್ರ ಮೋದಿ ನಾಯಕತ್ವ ದೇಶಕ್ಕೆ ಅಗತ್ಯವಿದೆ: ಜೆಡಿಎಸ್ ಶಾಸಕ ಜಿಟಿ ದೇವೇಗೌಡ

Prasthutha|

ವಿಜಯಪುರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವ ದೇಶಕ್ಕೆ ಅಗತ್ಯವಾಗಿದೆ. ಹೀಗಾಗಿ ಅವರನ್ನ ಉಳಿಸುವ ನಿರ್ಣಯ ಮಾಡಿದ್ದೇವೆ ಎಂದು ಜೆಡಿಎಸ್ ಹಿರಿಯ ನಾಯಕ ಜಿಟಿ ದೇವೇಗೌಡ ಹೇಳಿದರು.

- Advertisement -

ವಿಜಯಪುರಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಜಿಟಿ ದೇವೇಗೌಡ, ರಾಜ್ಯದಲ್ಲಿ ಸರ್ಕಾರ ಇದೆ ಎನಿಸ್ತಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯದ ಜನರಿಗೆ ಕೊರಗು ಉಂಟಾಗಿದೆ. ಕಾಂಗ್ರೆಸ್ ತಂದು ತಪ್ಪು ಮಾಡಿದ್ದೇವೆ ಎಂದು ಜನರಿಗೆ ಮನದಟ್ಟಾಗಿದೆ. ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ತೆಗೆಯಬೇಕಿದೆ. ಇದಕ್ಕಾಗಿ ಜೆಡಿಎಸ್-ಬಿಜೆಪಿ ಒಟ್ಟಾಗಿ ಹೋಗಬೇಕು ಎಂದು ಹೇಳಿದರು.

ಶಾಸಕರ ಅನುದಾನ ಕಡಿತ, ಪ್ರತಿಭಟನೆ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಜೆಡಿಎಸ್ ಕೋರ್ ಕಮೀಟಿ ಅಧ್ಯಕ್ಷ ಜಿ.ಟಿ ದೇವೆಗೌಡ, ಈಗಾಗಲೇ ಶಾಸಕ ಕಾಗೆ ಹಾಗೂ ಬಿ ಆರ್ ಪಾಟೀಲ್ ತಮ್ಮ ಅಸಮಧಾನ ಹೊರ ಹಾಕಿದ್ದಾರೆ. ಭೀಕರವಾದ ಬರಗಾದಲ್ಲೂ ಸರ್ಕಾರ ರೈತರ ಕಡೆಗೆ ನೋಡ್ತಿಲ್ಲ. ರೈತರಿಗೆ ನೀಡಬೇಕಾದ ಅನುದಾನ ನೀಡ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.