ನವದೆಹಲಿ: ಸಂವಿಧಾನ, ಪ್ರಜಾಸತ್ತಾತ್ಮಕ ಸಂಸ್ಥೆಗಳು ಮತ್ತು ನಾಗರಿಕರ ಮೇಲೆ ಆಡಳಿತಾರೂಢ ಪಕ್ಷ ನಡೆಸುತ್ತಿರುವ ದೌರ್ಜನ್ಯದಿಂದ ರಕ್ಷಿಸುವ ರಾಷ್ಟ್ರಪತಿ ದೇಶಕ್ಕೆ ಅಗತ್ಯವಿದೆ ಎಂದು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.
ಕಾಂಗ್ರೆಸ್ ನಾಯಕರೊಂದಿಗೆ ಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನ, ಪ್ರಜಾಸತ್ತಾತ್ಮಕ ಸಂಸ್ಥೆಗಳು ಮತ್ತು ನಾಗರಿಕರ ಮೇಲೆ ಆಡಳಿತಾರೂಢ ಪಕ್ಷ ನಡೆಸುತ್ತಿರುವ ದೌರ್ಜನ್ಯದಿಂದ ರಕ್ಷಿಸುವ ರಾಷ್ಟ್ರಪತಿ ರಾಷ್ಟ್ರಕ್ಕೆ ಅಗತ್ಯವಿದೆ. ಭಾರತದಲ್ಲಿ ಒಡೆದು ಹೋಗಿರುವ ಸಾಮಾಜಿಕತೆಯನ್ನು ಮತ್ತೆ ರಚಿಸುವಂತಹ ಅಧ್ಯಕ್ಷರನ್ನು ಜನ ಆಯ್ಕೆ ಮಾಡುತ್ತಾರೆ. ಚರ್ಚೆಗಳು ಮುಕ್ತ ಮನಸ್ಸಿನಿಂದ ಮತ್ತು ಉತ್ತಮ ಮನೋಭಾವಕ್ಕೆ ಅನುಗುಣವಾಗಿರಬೇಕು. ಇತರ ರಾಜಕೀಯ ಪಕ್ಷಗಳೊಂದಿಗೆ ಕಾಂಗ್ರೆಸ್ ಈ ಚರ್ಚೆಯನ್ನು ಮುಂದಕ್ಕೆ ಕೊಂಡೊಯ್ಯಬೇಕೆಂದು ಭಾವಿಸುತ್ತದೆ ಎಂದು ಹೇಳಿದ್ದಾರೆ.