Home ಟಾಪ್ ಸುದ್ದಿಗಳು ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ: ಸೋನಿಯಾ ಗಾಂಧಿ

ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ: ಸೋನಿಯಾ ಗಾಂಧಿ

ಜೈಪುರ: ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಕಾಂಗ್ರೆಸ್ ನಾಯಕ ಸೋನಿಯಾ ಗಾಂಧಿ ಹೇಳಿದ್ದಾರೆ.


ಜೈಪುರದಲ್ಲಿ ನಡೆದ ಪಕ್ಷದ ಲೋಕಸಭೆ ಚುನಾವಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನಮ್ಮ ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶಪಡಿಸಲಾಗುತ್ತಿದೆ. ದೇಶದ ಸಂವಿಧಾನವನ್ನು ಬದಲಾಯಿಸಲು ಸಂಚು ನಡೆಯುತ್ತಿದೆ. ಇದು ಸರ್ವಾಧಿಕಾರಿ ಧೋರಣೆ ಎಂದು ತಿಳಿಸಿದರು.


‘ತಮ್ಮನ್ನು ತಾವೇ ಶ್ರೇಷ್ಠ ಎಂದು ಬಿಂಬಿಸಿಕೊಳ್ಳುವ ಪ್ರಧಾನಿ ಮೋದಿ, ದೇಶದ ಘನತೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಿತ್ತು ಹಾಕುತ್ತಿದ್ದಾರೆ. ಅನೇಕ ತಂತ್ರಗಳನ್ನು ಹೆಣೆದು ವಿರೋಧ ಪಕ್ಷದ ನಾಯಕರನ್ನು ಬಿಜೆಪಿಗೆ ಸೇರುವಂತೆ ಒತ್ತಾಯಿಸಲಾಗುತ್ತಿದೆ’ ಎಂದು ಅವರು ಆರೋಪಿಸಿದರು.

Join Whatsapp
Exit mobile version