ಬೆಳಗಾವಿ: ದೇಶದ ಸಂಪತ್ತು ಮುಸ್ಲಿಮರಿಗೆ ಹಂಚುತ್ತೇನೆಂಬ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ‘ಇದು ಓಲೈಕೆ ಅಲ್ಲದೇ ಬೇರೇನು ಎಂದು ಸರ್ಕಾರಕ್ಕೆ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ನಾಡಿನ ಸಿಎಂ ಆಗಿ ರಾಜ್ಯದ ಸರ್ವತೋಮುಖ ಜನರ ಅಭಿವೃದ್ಧಿ ಮಾಡಬೇಕು. ಒಂದು ಸಮಾಜವನ್ನು ಓಲೈಕೆ ಮಾಡೋದಲ್ಲ ಎಂದು ವಿಧಾನಸಭೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ‘ರಾಜ್ಯದ ಎಲ್ಲ ಜನರ ಬದುಕು ಕಟ್ಟಲು ಈ ಸರ್ಕಾರ ಇರಬೇಕು. ಕಳೆದ ಬಜೆಟ್ ನಲ್ಲಿ ಇವರೆಷ್ಟು ಹಣ ಇಟ್ಟಿದ್ದರು ಅದನ್ನು ಮೊದಲು ಕೊಡಲಿ. ಬಳಿಕ ಮುಂದಿನ ವರ್ಷ 10 ಸಾವಿರ ಕೋಟಿ ಕೊಡಲಿ ಎಂದರು.