Home ಟಾಪ್ ಸುದ್ದಿಗಳು ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ, ಕೃತ್ಯವನ್ನು ಚಿತ್ರೀಕರಿಸಿದ ಪತ್ನಿ: ದಂಪತಿ ಬಂಧನ

ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ, ಕೃತ್ಯವನ್ನು ಚಿತ್ರೀಕರಿಸಿದ ಪತ್ನಿ: ದಂಪತಿ ಬಂಧನ

ಬಡೂನ್: ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ ಎಸಗಿದ ಘಟನೆಯನ್ನು ಆರೋಪಿಯ ಪತ್ನಿಯೇ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ ಘಟನೆ ಉತ್ತರ ಪ್ರದೇಶದ ಬಡೂನ್ ಜಿಲ್ಲೆಯಲ್ಲಿ ನಡೆದಿದೆ. ಈ ಸಂಬಂಧ ದಂಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿ ನೀಡಿದ ದೂರಿನ ಮೇರೆಗೆ ಅತ್ಯಾಚಾರ, ಪೋಕ್ಸೊ ಕಾಯ್ದೆ ಮತ್ತು ಐಟಿ ಕಾಯ್ದೆಯ ಸೆಕ್ಷನ್ ಗಳಡಿ ಎಫ್ ಐಆರ್ ದಾಖಲಿಸಿ ಇಬ್ಬರನ್ನೂ ಬಂಧಿಸಲಾಗಿದೆ ಎಂದು ಫಯಾಜ್ ಗಂಜ್ ಬೆಥಾ ಪೊಲೀಸ್ ಠಾಣೆಯ ಉಸ್ತುವಾರಿ ಚರಣ್ ಸಿಂಗ್ ರಾಣಾ ಹೇಳಿದ್ದಾರೆ.

ಸಂತ್ರಸ್ತೆಯ ಗ್ರಾಮದವನೇ ಆರೋಪಿ ಜುಲೈ 12ರಂದು ತನ್ನ ಮನೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದಲ್ಲದೆ, ಆ ಘಟನೆಯನ್ನುಆತನ ಪತ್ನಿ ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದಾಳೆ. ಘಟನೆ ಬಗ್ಗೆ ಯಾರಿಗಾದರೂ ತಿಳಿಸಿದರೆ, ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿ ಪತ್ನಿ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದಾಗ ಅಪ್ರಾಪ್ತೆಯ ಕುಟುಂಬ ಸದಸ್ಯರಿಗೆ ಘಟನೆಯ ಬಗ್ಗೆ ತಿಳಿದಿದ್ದು, ನಂತರ ಪೊಲೀಸ್ ರಿಗೆ ದೂರು ನೀಡಿದ್ದಾರೆ.

Join Whatsapp
Exit mobile version