ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ

Prasthutha|

ಬೆಂಗಳೂರು: ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಕಾಡುಗೋಡಿ ಸಮೀಪದ ಸಾಯಿ ಗಾರ್ಡನ್ ನಲ್ಲಿ ನಡೆದಿದೆ.

- Advertisement -


ಆತ್ಮಹತ್ಯೆಗೂ ಮುನ್ನ ಪತ್ನಿ ಹಾಗೂ ಮಕ್ಕಳನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ.


ಪತಿ ವೀರಾರ್ಜುನ ವಿಜಯ್ (31), ಪತ್ನಿ ಹೇಮಾವತಿ (29) ಇಬ್ಬರು ಹೆಣ್ಣುಮಕ್ಕಳು ಮೃತಪಟ್ಟಿದ್ದಾರೆ.

- Advertisement -


ವೀರಾರ್ಜುನ ವಿಜಯ್ ಐಟಿಪಿಎಲ್ನಲ್ಲಿರುವ ಯೂರೋ ಪಿಲ್ಸ್ ಎಂಬಲ್ಲಿ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಪತ್ನಿ ಹೇಮಾವತಿ ಮನೆಯಲ್ಲೇ ಇರುತ್ತಿದ್ದರು. ಎರಡುವರೆ ವರ್ಷದ ಮೋಕ್ಷ ಹಾಗೂ ನಾಲ್ಕು ವರ್ಷದ ಸೃಷ್ಟಿ ಎಂಬ ಇಬ್ಬರು ಹೆಣ್ಣುಮಕ್ಕಳು ಇದ್ದರು. ಹೇಮಾವತಿ ಸೋದರ ಕಳೆದ ಮೂರು ದಿನಗಳಿಂದ ಫೋನ್ ಮಾಡುತ್ತಿದ್ದಾರೆ. ಆದರೆ ಯಾರು ಫೋನ್ ಸ್ವೀಕರಿಸದೆ ಇದ್ದಾಗ ಗುರುವಾರ (ಆ.3) ಬೆಳಗ್ಗೆ ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಬಂದಿದ್ದಾರೆ. ಮನೆ ಬಾಗಿಲು ಎಷ್ಟೇ ತಟ್ಟಿದ್ದರೂ ತೆರೆಯದೇ ಇದ್ದಾಗ ಅನುಮಾನಗೊಂಡು ಮನೆಯ ಕಿಟಕಿಯಿಂದ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ತಲುಪಿಸಿದ್ದಾರೆ.

Join Whatsapp