ಸರಣಿ ಅಪಘಾತ: ದಂಪತಿ ಮೃತ್ಯು

Prasthutha|

ಚಿಕ್ಕಮಗಳೂರು: ಕಾರು, ಟಿಪ್ಪರ್, ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

- Advertisement -


ಶಿವಮೊಗ್ಗ ಮೂಲದ ಸಯ್ಯದ್ ಆಸೀಫ್(38), ಮಾಜಿನಾ(33) ಮೃತರು.


ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಸಮೀಪ ಮಂಗಳವಾರ ಕಾರು, ಟಿಪ್ಪರ್, ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದು, 1 ವರ್ಷದ ಮಗುವಿಗೆ ಗಾಯಗಳಾಗಿವೆ. ಅಪಘಾತದ ಬಳಿಕ ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ದಂಪತಿ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Join Whatsapp