ಕೇಜ್ರಿವಾಲ್ ಜಾಮೀನು ಅರ್ಜಿ: ವಿಚಾರಣೆ ಮುಂದೂಡಿದ ಕೋರ್ಟ್

Prasthutha|

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ಕೋರ್ಟ್ ಮುಂದೂಡಿದೆ.

- Advertisement -

ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಲು ಜಾರಿ ನಿರ್ದೇಶನಾಲಯವು (ಇ.ಡಿ) ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಮುಖೇಶ್ ಕುಮಾರ್ ಅವರು ವಿಚಾರಣೆಯನ್ನು ಜೂನ್ 19ಕ್ಕೆ ಮುಂದೂಡಿದ್ದಾರೆ.


ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಜೈಲು ಅಧಿಕಾರಿಗಳಿಗೂ ನ್ಯಾಯಾಧೀಶರು ಸೂಚಿಸಿದ್ದಾರೆ ಎನ್ನಲಾಗಿದೆ.

Join Whatsapp