ಜ್ಞಾನವಾಪಿ ಮಸೀದಿ ಬೆನ್ನಲ್ಲೇ ಮಥುರಾ ಶಾಹಿ ಈದ್ಗಾ ಮಸೀದಿ ಸಮೀಕ್ಷೆ ಕೋರಿ ಅರ್ಜಿ: ವಿಚಾರಣೆಗೆ ಒಪ್ಪಿದ ನ್ಯಾಯಾಲಯ

Prasthutha|

ಹೊಸದಿಲ್ಲಿ: ವಾರಾಣಸಿಯ ಜ್ಞಾನವಾಪಿ ಮಸೀದಿ ವೀಡಿಯೋ ಸಮೀಕ್ಷೆಗೆ ನ್ಯಾಯಾಲಯ ಆದೇಶಿಸಿ, ಸಮೀಕ್ಷೆ ಪೂರ್ಣಗೊಂಡಿರುವ ಬೆನ್ನಲ್ಲೇ ಮಥುರಾದ ಕೃಷ್ಣ ಜನ್ಮಭೂಮಿ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿಯಲ್ಲಿ ವೀಡಿಯೋಗ್ರಾಫಿ ಸಮೀಕ್ಷೆ ನಡೆಸಬೇಕೆಂದು ಮಥುರಾ ಸ್ಥಳೀಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ.

- Advertisement -


ಅರ್ಜಿ ವಿಚಾರಣೆಗೆ ನ್ಯಾಯಾಲಯ ಒಪ್ಪಿಗೆ ಸೂಚಿಸಿದ್ದು, ಜುಲೈ 1 ರಂದು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ.
ಶಾಹಿ ಈದ್ಗಾ ಮಸೀದಿ ಆವರಣದಲ್ಲಿ ಹಿಂದೂ ಕಲಾಕೃತಿಗಳು ಹಾಗೂ ಪ್ರಾಚೀನ ಧಾರ್ಮಿಕ ಶಾಸನಗಳ ಅಸ್ತಿತ್ವವಿದೆ. ಹಾಗಾಗಿ, ಜ್ಞಾನವಾಪಿ ಮಸೀದಿಯಂತೆಯೇ ಶಾಹಿ ಈದ್ಗಾ ಮಸೀದಿಯ ವೀಡಿಯೊ ಸಮೀಕ್ಷೆಗಾಗಿ ಅಡ್ವೊಕೇಟ್ ಕಮಿಷನರ್ ಅವರನ್ನು ನೇಮಿಸಬೇಕು ಎಂದು ಮಥುರಾದ ಸಿವಿಲ್ ಜಡ್ಜ್ ( ಸೀನಿಯರ್ ಡಿವಿಷನ್ ) ಕೋರ್ಟ್ ಗೆ ಸಲ್ಲಿಸಿದ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ .
ಶ್ರೀಕೃಷ್ಣ ಜನ್ಮಭೂಮಿ – ಶಾಹಿ ಈದ್ಗಾ ಮಸೀದಿ ವಿವಾದದ ಕುರಿತ ಎಲ್ಲ ಅರ್ಜಿಗಳನ್ನು ನಾಲ್ಕು ತಿಂಗಳೊಳಗೆ ವಿಲೇವಾರಿ ಮಾಡಬೇಕು ಎಂದು ಈಗಾಗಲೇ ಅಧೀನ ನ್ಯಾಯಾಲಯಕ್ಕೆ ಅಲಹಾಬಾದ್ ಹೈಕೋರ್ಟ್ ನಿರ್ದೇಶನ ನೀಡಿದೆ .

Join Whatsapp