ಬೆಂಗಳೂರು: ಟಿಪ್ಪು ಸುಲ್ತಾನ್ ಜೀವನ ಕುರಿತು ರಂಗಾಯಣ ನಿರ್ದೇಶಕ ಅಡ್ಡಾಂಡ ಕಾರ್ಯಪ್ಪ ಅವರು ರಚಿಸಿರುವ ‘ಟಿಪ್ಪು ನಿಜ ಕನಸುಗಳು’ ಕೃತಿ ಮಾರಾಟ ಮಾಡುವುದಕ್ಕೆ ನ್ಯಾಯಾಲಯ ನಿರ್ಬಂಧ ವಿಧಿಸಿ ಆದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್.ರಫಿವುಲ್ಲಾ ಎಂಬುವರು ಸಲ್ಲಿಸಿರುವ ಅರ್ಜಿಯನ್ನು ನಗರದ 14 ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ಜೆ.ಎನ್. ಮೆಂಡೋನ್ಕಾ ವಿಚಾರಣೆ ನಡೆಸಿದರು. ಮುಂದಿನ ವಿಚಾರಣೆಯವರೆಗೂ ಪುಸ್ತಕವನ್ನು ಅಂಗಡಿಗಳಲ್ಲಿ ಅಥವಾ ಸಾಮಾಜಿಕ ಜಾಲತಾಣಗಳಲ್ಲಿಯೂ ಮಾರಾಟ ಮಾಡದಂತೆ ಸೂಚನೆ ನೀಡಿದ್ದಾರೆ.