Home ಟಾಪ್ ಸುದ್ದಿಗಳು ಪೂಜಾ ಖೇಡ್ಕರ್ ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ನ್ಯಾಯಾಲಯ

ಪೂಜಾ ಖೇಡ್ಕರ್ ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ನ್ಯಾಯಾಲಯ

ನವದೆಹಲಿ: ಸುಳ್ಳು ಮಾಹಿತಿ ನೀಡಿ ಒಬಿಸಿ ಮತ್ತು ಅಂಗವಿಕಲ ವ್ಯಕ್ತಿ (PwD) ಕೋಟಾ ಪ್ರಯೋಜನಗಳನ್ನು ಪಡೆದ ಆರೋಪ ಎದುರಿಸುತ್ತಿರುವ ಐಎಎಸ್ ಪ್ರೊಬೇಷನರಿ ಮಾಜಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ನಿರೀಕ್ಷಣಾ ಜಾಮೀನು ನಿರಾಕರಿಸಿದೆ.


ಯುಪಿಎಸ್ ಸಿ ಅಲ್ಲಿರುವ ಯಾರಾದರೂ ಖೇಡ್ಕರ್ ಗೆ ಸಹಾಯ ಮಾಡಿದ್ದಾರೆಯೇ? ಎಂಬುದರ ಬಗ್ಗೆ ದೆಹಲಿ ಪೊಲೀಸರು ತನಿಖೆ ಮಾಡಬೇಕು ಎಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ದೇವೆಂದರ್ ಕುಮಾರ್ ಜಂಗಾಲ ಅವರು ಆದೇಶಿಸಿದ್ದಾರೆ.


ಒಬಿಸಿ ಮತ್ತು ಪಿಡಬ್ಲ್ಯೂಡಿ ಕೋಟಾಗಳ ಅಡಿಯಲ್ಲಿ ಅರ್ಹತೆ ಇಲ್ಲದೆ ಇನ್ಯಾರಾದರೂ ಪ್ರಯೋಜನ ಪಡೆದಿದ್ದರೆ, ಆ ಕುರಿತು ತನಿಖೆ ನಡೆಸುವಂತೆಯೂ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.
ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಪೂಜಾ ಖೇಡ್ಕರ್ ಅವರ ನೇಮಕಾತಿ ಆದೇಶವನ್ನು ರದ್ದುಗೊಳಿಸಿದೆ. ಅದರ ಜೊತೆಗೆ ಭವಿಷ್ಯದ ಎಲ್ಲ ಪರೀಕ್ಷೆಗಳು ಮತ್ತು ಆಯ್ಕೆಗಳಿಂದ ಅವರನ್ನು ಡಿಬಾರ್ ಮಾಡಿದೆ.

Join Whatsapp
Exit mobile version