Home ಟಾಪ್ ಸುದ್ದಿಗಳು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರ ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರ ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್, ಕೆ.ಗೋವಿಂದರಾಜ್, ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರ ಸುನೀಲ್ ಕನಗೋಲು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಕೆ.ವಿ. ಪ್ರಭಾಕರ್ ಅವರನ್ನು ನೇಮಕ ಮಾಡಿ ಸಂಪುಟ ದರ್ಜೆಯ ಸ್ಥಾನಮಾನ ನೀಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.


ವಕೀಲರಾದ ಎಸ್. ಉಮಾಪತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ಧೀಕ್ಷಿತ್ ಅವರಿದ್ದ ನ್ಯಾಯಪೀಠ ಅರ್ಜಿ ವಜಾಗೊಳಿಸಿದೆ. ಅಲ್ಲದೆ, ಸಚಿವರನ್ನು ಹೊರತು ಪಡಿಸಿ ಇತರರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ನೀಡಬಾರದು ಎಂಬುದಾಗಿ ಎಲ್ಲಿಯೂ ಹೇಳಿಲ್ಲ. ಅಲ್ಲದೆ, ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವವರಿಗೆ ಯಾವುದೇ ಇಲಾಖೆ ನೀಡಿ ಸರ್ಕಾರದ ಜವಾಬ್ದಾರಿಗಳನ್ನು ನೀಡಿಲ್ಲ ಎಂದು ಅಭಿಪ್ರಾಯ ಪಟ್ಟ ನ್ಯಾಯಪೀಠ, ಅರ್ಜಿ ವಜಾಗೊಳಿಸಿದ್ದಕ್ಕೆ ಸೂಕ್ತ ಕಾರಣಗಳನ್ನು ವಿವರವಾದ ಆದೇಶದಲ್ಲಿ ಉಲ್ಲೇಖಿಸಲಾಗುವುದು ಎಂದು ತಿಳಿಸಿದೆ.

Join Whatsapp
Exit mobile version