ಜ್ಞಾನವಾಪಿ ಮಸೀದಿಯ ಸಮೀಕ್ಷೆ: ಮಾಹಿತಿ ಮಾಧ್ಯಮಗಳಿಗೆ ಸೋರಿಕೆ ಮಾಡಿದ ಕಮಿಷನರನ್ನು ಸಮಿತಿಯಿಂದ ಹೊರಗಿಟ್ಟ ನ್ಯಾಯಾಲಯ

Prasthutha|

ಲಕ್ನೋ: ಜ್ಞಾನವಾಪಿ ಮಸೀದಿ ಸರ್ವೆಯ ಮಾಹಿತಿಯನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ ಕೋರ್ಟ್ ಕಮಿಷನರ್ ಅಜಯ್ ಮಿಶ್ರಾ ಅವರನ್ನು ವಾರಾಣಸಿ ಸ್ಥಳೀಯ ನ್ಯಾಯಾಲಯವೊಂದು ಸಮಿತಿಯಿಂದ ತೆಗೆದುಹಾಕಿದೆ.

- Advertisement -


ಸಮೀಕ್ಷೆಯ ವರದಿಯನ್ನು ಸಲ್ಲಿಸಲು ನ್ಯಾಯಾಲಯ ಇನ್ನೆರಡು ದಿನಗಳ ಕಾಲಾವಕಾಶವನ್ನು ನೀಡಿದೆ. ಅಜಯ್ ಮಿಶ್ರಾ ಅವರನ್ನು ಸಮಿತಿಯಿಂದ ಹೊರಗಿಡಲಾಗಿದೆ. ಇನ್ನುಳಿದ ಇಬ್ಬರು ಕಮಿಷನರ್ ಗಳು ತಮ್ಮ ವರದಿಯನ್ನು ಸಲ್ಲಿಸಬೇಕಾಗುತ್ತದೆ.


ಇದಕ್ಕೂ ಮೊದಲು, ವಿಶೇಷ ಅಡ್ವೊಕೇಟ್ ಕಮಿಷನರ್ ವಿಶಾಲ್ ಸಿಂಗ್ ಅವರು ಸಿವಿಲ್ ನ್ಯಾಯಾಧೀಶ (ಹಿರಿಯ ವಿಭಾಗ) ರವಿ ಕುಮಾರ್ ದಿವಾಕರ್ ಅವರಿಗೆ ಅರ್ಜಿ ಸಲ್ಲಿಸಿ, ವಿವಾದಿತ ಸ್ಥಳದ ಎಲ್ಲಾ ಪ್ರಮುಖ ಸಂಗತಿಗಳನ್ನು ನ್ಯಾಯಾಲಯದ ಆಯೋಗದ ವರದಿಯಲ್ಲಿ ಸೇರಿಸಲು ಎರಡು ದಿನಗಳ ಕಾಲಾವಕಾಶ ಕೋರಿದ್ದರು. ಇದೀಗ ನ್ಯಾಯಾಲಯ ಕಾಲಾವಕಾಶ ನೀಡಿದೆ.

Join Whatsapp