ನವದೆಹಲಿ: ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಲ್ಲಿ ಬಂಧಿತರಾಗಿರುವ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮುಹಮ್ಮದ್ ಝುಬೈರ್ ಅವರ ಪೊಲೀಸ್ ಕಸ್ಟಡಿ ಅವಧಿಯನ್ನು ಮುಂದಿನ ಮಂಗಳವಾರದ ವರೆಗೆ ವಿಸ್ತರಿಸಿ ನ್ಯಾಯಾಲಯ ಆದೇಶ ನೀಡಿದೆ.
- Advertisement -
ಆರೋಪಿ ಝುಬೈರ್ ಮತ್ತು ದೆಹಲಿ ಪೊಲೀಸರ ವಾದ-ಪ್ರತಿವಾದವನ್ನು ಆಲಿಸಿದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸ್ನಿಗ್ಧಾ ಸರ್ವರಿಯ ಅವರು ಈ ಆದೇಶವನ್ನು ನೀಡಿದರು.